Home > ಇತರೆ > ಹಾಡೊಂದ ಹಾಡುವೆ ನೀ ಕೇಳು ಮಗುವೆ

ಹಾಡೊಂದ ಹಾಡುವೆ ನೀ ಕೇಳು ಮಗುವೆ

ಚಿತ್ರ : ನಾಂದಿ
ಗಾಯಕ : ಪಿ.ಬಿ.ಶ್ರೀನಿವಾಸ್

ಹಾಡೊಂದ ಹಾಡುವೆ ನೀ ಕೇಳು ಮಗುವೆ
ಬರಿದಾದ ಮನೆ ಬೆಳಗೆ ನೀನೆಂದು ಬರುವೆ

ಸೀಮಂತದಾನಂದ ನಾ ನೀಡಲಿಲ್ಲ
ನಿನಗಾಗಿ ಮಹಿಳೆಯರು ತಾ ಹಾಡಲಿಲ್ಲ
ಸಿರಿವಂತರಾ ಭೊಗ ನಿನಗಿಲ್ಲಿ ಇಲ್ಲಾ
ಸಿರಿಯಾಗಿ ನಿಧಿಯಾಗಿ ನೀ ಬರುವೆಯಲ್ಲಾ

||ಹಾಡೊಂದ ಹಾಡುವೆ||

ನಿನ್ನೊಂದು ನುಡಿ ಮುತ್ತು ಸವಿ ಜೇನಿನಂತೆ
ಆ ಸುಖದೆ ನಾ ಮರೆವೆ ಈ ಬಾಳ ಚಿಂತೆ
ಅದ ಕೇಳೊ ಸೌಭಾಗ್ಯ ಈ ತಾಯಿಗಿಲ್ಲಾ
ಇವಳಾಸೆ ಆಕಾಂಕ್ಷೆ ನೀನಾದೆ ಎಲ್ಲಾ

||ಹಾಡೊಂದ ಹಾಡುವೆ||

Categories: ಇತರೆ
  1. No comments yet.
  1. No trackbacks yet.