Home > ಕವನ > ಎದೆ ತುಂಬಿ ಹಾಡಿದೆನು

ಎದೆ ತುಂಬಿ ಹಾಡಿದೆನು

ಕವಿ : ಜಿ.ಎಸ್.ಶಿವರುದ್ರಪ್ಪ

ಎದೆ ತುಂಬಿ ಹಾಡಿದೆನು ಅಂದು ನಾನು
ಮನವಿಟ್ಟು ಕೇಳಿದಿರಿ ಅಲ್ಲಿ ನೀವು

ಇಂದು ನಾ ಹಾಡಿದರೂ ಅಂದಿನಂತೆಯೆ ಕುಳಿತು
ಕೇಳುವಿರಿ ಸಾಕೆನಗೆ ಅದುವೆ ಬಹುಮಾನ
ಹಾಡು ಹಕ್ಕಿಗೆ ಬೇಕೆ ಬಿರುದು ಸನ್ಮಾನ

ಎಲ್ಲ ಕೇಳಲಿ ಎಂದು ನಾನು ಹಾಡುವುದಿಲ್ಲ
ಹಾಡುವುದು ಅನಿವಾರ್ಯ ಕರ್ಮ ನನಗೆ
ಕೇಳುವವರಿಹರೆಂದು ನಾ ಬಲ್ಲೆ ಅದರಿಂದ
ಹಾಡುವೆನು ಮೈ ದುಂಬಿ ಎಂದಿನಂತೆ
ಯಾರು ಕಿವಿ ಮುಚ್ಚಿದರು ಎನಗಿಲ್ಲ ಚಿಂತೆ

Categories: ಕವನ
  1. No comments yet.
  1. No trackbacks yet.