Home > ಇತರೆ, ಕವನ > ಸಂಪಿಗೆ ಮರದ ಹಸಿರೆಲೆ ನಡುವೆ ಕೋಗಿಲೆ ಹಾಡಿತ್ತು

ಸಂಪಿಗೆ ಮರದ ಹಸಿರೆಲೆ ನಡುವೆ ಕೋಗಿಲೆ ಹಾಡಿತ್ತು

ಸಾಹಿತ್ಯ : ಆರ್.ಎನ್. ಜಯಗೋಪಾಲ್
ಸಂಗೀತ : ವಿಜಯಭಾಸ್ಕರ್
ಗಾಯನ : ಬಿ.ಕೆ. ಸುಮಿತ್ರ

ಸಂಪಿಗೆ ಮರದ ಹಸಿರೆಲೆ ನಡುವೆ ಕೋಗಿಲೆ ಹಾಡಿತ್ತು
ಚಿಕ್ಕವ್ವ..ಚಿಕ್ಕವ್ವ..ಎನ್ನುತ ತನ್ನಯ ಗೆಳೆಯರ ಕರೆದಿತ್ತು
ಅದ ಕೇಳಿ ನಾ ಮೈ ಮರೆತೆ ಸ್ವರವೊಂದು ಆಗಲೆ ಕಲಿತೆ
ಹಾಡಿದೆ ಈ ಕವಿತೆ ನಾ ಹಾಡಿದೆ ಈ ಕವಿತೆ

ದೂರದ ಗುಡಿಯಲಿ ಪೂಜೆಯ ವೇಳೆಗೆ ಘಂಟೆಯು ಮೊಳಗಿತ್ತು
ಟಣ್ ಡಣ್ ಟಣ್ ಡಣ್..ಎನ್ನುತ ಸೇವೆಗೆ ಎಲ್ಲರ ಕರೆದಿತ್ತು
ಅದಕೇಳಿ ನಾ ಮೈಮರೆತೆ ಸ್ವರವೊಂದು ಆಗಲೆ ಕಲಿತೆ
ಹಾಡಿದೆ ಈ ಕವಿತೆ ನಾ ಹಾಡಿದೆ ಈ ಕವಿತೆ

ಹರಿಯುವ ನದಿಯಾ ನೋಡುತ ನಿಂತೆ ಅಲೆಗಳು ಕುಣಿದಿತ್ತು
ಕಲ ಕಲ ಕಲ ಕಲ..ಮಂಜುಳ ನಾದವು ಕಿವಿಗಳ ತುಂಬಿತ್ತು
ಅದಕೇಳಿ ನಾ ಮೈ ಮರೆತೆ ಸ್ವರವೊಂದು ಆಗಲೆ ಕಲಿತೆ
ಹಾಡಿದೆ ಈ ಕವಿತೆ ನಾ ಹಾಡಿದೆ ಈ ಕವಿತೆ

Categories: ಇತರೆ, ಕವನ
  1. No comments yet.
  1. No trackbacks yet.