ಕವಿ – ದತ್ತಾತ್ರೇಯ ರಾಮಚಂದ್ರ ಬೇಂದ್ರೆ
ಉತ್ತರ ಧ್ರುವದಿಂ ದಕ್ಷಿಣ ಧ್ರುವಕೂ
ಚುಂಬಕ ಗಾಳಿಯು ಬೇಸುತಿದೆ
ಸೂರ್ಯನ ಬಿಂಬಕೆ ಚಂದ್ರನ ಬಿಂಬವು
ರಂಭಿಸಿ ನಗೆಯಲಿ ಮೀಸುತಿದೆ
ಭೂರಂಗಕೆ ಅಭಿಸಾರಕೆ
ತಿಂಗಳು ತಿಂಗಳು ನವೆಯುತಿದೆ
ತುಂಬುತ ತುಳುಕುತ ತೀರುತ ತನ್ನೊಳು
ತಾನೆ ಸವಿಯನು ಸವಿಯುತಿದೆ
ಭೂವನ ಕುಸುಮಿಸಿ ಪುಲಕಿಸಿ ಮರಳಿಸಿ
ಕೋಟಿ ಕೋಟಿ ಸಲ ಹೊಸಯಿಸಿತು
ಮಿತ್ರನ ಮೈತ್ರಿಯ ಒಸಗೆ ಮಸಗದೆ
ಮರುಕದ ಧಾರೆಯ ಮಸೆಯಿಸಿತು
ಅಕ್ಷಿನಿಮಿಲನ ಮೂಡದೆ ನಕ್ಷತ್ರದ
ಗಣ ಗಗನದಿ ಹಾರದಿದೆ
ಬಿದಿಗೆಯ ಬಿಂಬಾಧರದಲಿ ಇಂದಿಗು
ಮಿಲನದ ಚಿಹ್ನವು ತೋರದಿದೆ
ನಿಮ್ಮದೊಂದು ಉತ್ತರ