ಕವಿ : ಹುಯಿಲಗೋಳ ನಾರಾಯಣರಾಯರು
ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು
ಬದುಕು ಬಲುಹಿನ ನಿಧಿಯು ಸದಭಿಮಾನದ ಗೂಡು.
ರಾಜನ್ಯರಿಪು ಪರಶುರಾಮನಮ್ಮನ ನಾಡು
ಆ ಜಲಧಿಯನೆ ಜಿಗಿದ ಹನುಮನುದಿಸಿದ ನಾಡು
ಓಜೆಯಿಂ ಮೆರೆದರಸುಗಳ ಸಾಹಸದ ಸೂಡು
ತೇಜವನು ನಮಗೀವ ವೀರವೃಂದದ ಬೀಡು.
ಲೆಕ್ಕಿಗಮಿತಾಕ್ಷರರು ಬೆಳೆದು ಮೆರೆದಿಹ ನಾಡು
ಜಕ್ಕಣನ ಶಿಲ್ಪಕಲೆಯಚ್ಚರಿಯ ಕರುಗೋಡು
ಚೊಕ್ಕಮತಗಳ ಸಾರಿದವರಿಗಿದು ನೆಲೆವೀಡು
ಬೊಕ್ಕಸದ ಕಣಜವೈ ವಿದ್ವತ್ತೆಗಳ ಕಾಡು.
ಪಾವನೆಯರಾ ಕೃಷ್ಣೆ ಭೀಮೆಯರ ತಾಯ್ನಾಡು
ಕಾವೇರಿ ಗೋದೆಯರು ಮೈದೊಳೆವ ನಲುನಾಡು
ಆವಗಂ ಸ್ಪೂರ್ತಿಸುವ ಕಬ್ಬಿಗರ ನಡೆಮಾಡು
ಕಾವ ಗದುಗಿನ ವೀರನಾರಾಯಣನ ಬೀಡು.
U can write still more na Any how very nice
ಗಾಯತ್ರಿಯವರೆ,
ಇನ್ನು ಹೆಚ್ಚು ಬರೆಯಬೇಕು, ಬರೆಯುತ್ತೇನೆ. ಮೆಚ್ಚುಗೆಗೆ ಧನ್ಯವಾದಗಳು.
ಬಾಲ.