ಕವಿ: ಎನ್.ಎಸ್ ಲಕ್ಷ್ಮೀನಾರಾಯಣ ಭಟ್ಟ
ಎಲ್ಲಿ ಜಾರಿತೋ ಮನವು ಎಲ್ಲೆ ಮೀರಿತೋ
ಎಲ್ಲಿ ಅಲೆಯುತಿಹುದೋ ಏಕೆ ನಿಲ್ಲದಾಯಿತೋ
ದೂರದೊಂದು ತೀರದಿಂದ
ತೇಲಿ ಪಾರಿಜಾತ ಗಂಧ
ದಾಟಿ ಬಂತು ಬೇಲಿ ಸಾಲ
ಮೀಟಿ ಹಳೆಯ ಮಧುರ ನೋವ
ಎಲ್ಲಿ ಜಾರಿತೋ ಮನವು ಎಲ್ಲೆ ಮೀರಿತೋ…
ಬಾನಿನಲ್ಲಿ ಒಂಟಿ ತಾರೆ ಸೋನೆ
ಸುರಿವ ಇರುಳ ಮೋರೆ
ಕತ್ತಲಲ್ಲಿ ಕುಳಿತು ಒಳಗೆ
ಬಿಕ್ಕುತಿಹಳು ಯಾರೋ ನೀರೆ
ಎಲ್ಲಿ ಜಾರಿತೋ ಮನವು ಎಲ್ಲೆ ಮೀರಿತೋ…
ಹಿಂದೆ ಯಾವ ಜನ್ಮದಲ್ಲೋ
ಮಿಂದ ಪ್ರೇಮ ಜಲದ ಕಂಪು
ಬಂದು ಚೀರುವೆದೆಯ ಭಾವ
ಹೇಳಲಾರೆ ತಾಳಲಾರೆ
ಎಲ್ಲಿ ಜಾರಿತೋ ಮನವು ಎಲ್ಲೆ ಮೀರಿತೋ..