ಕೃತಿ: ಮಂಕುತಿಮ್ಮನ ಕಗ್ಗ
ಕವಿ: ಡಿ.ವಿ.ಗುಂಡಪ್ಪ
ಬದುಕು ಜಟಕಾ ಬಂಡಿ ವಿಧಿ ಅದರ ಸಾಹೇಬ
ಕುದುರೆ ನೀನ್ ಅವನು ಪೇಳ್ದಂತೆ ಪಯಣಿಗರು
ಮದುವೆಗೋ ಮಸಣಕೋ ಬೇಕೆಂದ ಕಡೆಗೋಡು
ಪದಕುಸಿಯೇ ನೆಲವಿಹುದು ಮಂಕುತಿಮ್ಮ
ಹುಲ್ಲಾಗು ಬೆಟ್ಟದಡಿ ಮನೆಗೆ ಮಲ್ಲಿಗೆಯಾಗು
ಕಲ್ಲಾಗು ಕಷ್ಟಗಳ ಮಳೆಯ ವಿಧಿ ಸುರಿಯೆ
ಬೆಲ್ಲ ಸಕ್ಕರೆಯಾಗು ದೀನದುರ್ಬಲರಿಂಗೆ
ಎಲ್ಲರೊಳಗೊಂದಾಗು – ಮಂಕುತಿಮ್ಮ
ಅಕ್ಕಿಯೊಳಗನ್ನವನು ಮೊದಲಾರು ಕಂಡವರು
ಅಕ್ಕರದ ವಿದ್ಯೆಗದು ಮೊದಲಿಗನದಾರು
ಲೆಕ್ಕವಿರಿಸಿಲ್ಲ ಜಗ ತನ್ನಾದಿ ಬಂಧುಗಳ
ದಕ್ಕುವುದೇ ಜಸ ನಿನಗೆ ಮಂಕುತಿಮ್ಮ
ನಗುವು ಸಹಜದ ಧರ್ಮ ನಗಿಸುವುದು ಪರಧರ್ಮ
ನಗುವ ಕೇಳುತ ನಗುವುದತಿಶಯದ ಧರ್ಮ
ನಗುವ ನಗಿಸುವ ನಗಿಸಿ ನಗುತ ಬಾಳುವ ವರವ
ಮಿಗೆ ನೀನು ಬೇಡಿಕೊಳೊ ಮಂಕುತಿಮ್ಮ ||
ನಿಮ್ಮದೊಂದು ಉತ್ತರ