ಪರಿಚಯ:
ಕುವೆಂಪು – ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ ೨೯, ೧೯೦೪ – ನವೆಂಬರ್ ೧೧, ೧೯೯೪) – ಕನ್ನಡವು ಪಡೆದ ಅತ್ಯುತ್ತಮ ಕವಿಗಳಲ್ಲೊಬ್ಬರು, ಕರ್ನಾಟಕದ ಎರಡನೆ ರಾಷ್ಟ್ರಕವಿ. ಜ್ಞಾನಪೀಠ ಪ್ರಶಸ್ತಿಯನ್ನು ಪಡೆದ ಕನ್ನಡದ ಪ್ರಪ್ರಥಮ ವ್ಯಕ್ತಿ. ‘ವಿಶ್ವ ಮಾನವ’ ಪರಿಕಲ್ಪನೆಯನ್ನೂ ಸಾಹಿತ್ಯದ ಮೂಲಕ ಸಮಾಜಕ್ಕೆ ತಲುಪಿಸಿದವರು. ಕನ್ನಡ ಸಾಹಿತ್ಯಕ್ಕೆ ಇವರ ಕಾಣಿಕೆ ಅಪಾರ. ಕುವೆಂಪುರವರ ಮೊದಲ ಕಾವ್ಯನಾಮ-“ಕಿಶೋರ ಚಂದ್ರವಾಣಿ” -ನಂತರ ಅವರು ಕುವೆಂಪು ಕಾವ್ಯನಾಮ ಬಳಸಿ ಬರೆಯತೊಡಗಿದರು. ಇವರು ಮೈಸೂರಿನ ಒಂಟಿಕೊಪ್ಪಲಿನಲ್ಲಿರುವ “ಉದಯರವಿ”ಯಲ್ಲಿ ವಾಸಿಸುತ್ತಿದ್ದರು. ಇವರ ಪತ್ನಿ ಹೇಮಾವತಿ ಮತ್ತು ಇವರಿಗೆ ನಾಲ್ಕು ಜನ ಮಕ್ಕಳು(ಪೂರ್ಣಚಂದ್ರ ತೇಜಸ್ವಿ, ಕೋಕಿಲೋದಯ ಚೈತ್ರ, ಇಂದುಕಲಾ, ತಾರಿಣಿ ಚಿದಾನಂದ).

ಜನನ ಬಾಲ್ಯ:
ಡಿಸೆಂಬರ್ ೨೯, ೧೯೦೪, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹಿರೇಕೊಡಿಗೆಯಲ್ಲಿ ಕುವೆಂಪು ಅವರ ಜನನ. ಅನಂತರ “ತವರು ಮನೆ ಹಿರಿಕೊಡಿಗೆಯಿಂದ ಗಂಡನ ಮನೆ ಕುಪ್ಪಳಿಗೆ ಚೊಚ್ಚಲು ತಾಯಿಯಾಗಿ ಸೀತಮ್ಮನವರು ತೊಟ್ಟಿಲ ಕೂಸನ್ನು ಕರೆತಂದು ಮನೆವುಗಿಸಿದಂದಿನಿಂದ ” ತಂದೆಯ ಮನೆ ಕುಪ್ಪಳಿ ಪುಟ್ಟಪ್ಪನವರ “ಮನೆ”ಯಾಯಿತು. ಕುಪ್ಪಳಿ ಮನೆಯ ಉಪ್ಪರಿಗೆ ಪೂರ್ವದಿಕ್ಕಿಗೆ ತೆರೆದುಕೊಂಡಿದೆ. ಉಳಿದೆಲ್ಲ ದಿಕ್ಕಿಗೂ ಗೋಡೆ, ಕಿಟಕಿಗಳಿವೆ. ಅಲ್ಲಿ ಕುಳಿತು ನೋಡಿದರೆ ಎದುರಿಗೆ ಇಳಿಜಾರಾಗಿ ಮೇಲೆದ್ದಿರುವ ಅನಂತ ನಿಬಿಡಾರಣ್ಯ ಶ್ರೇಣಿಗಳು ಸುಂದರವಾಗಿ ರಂಜಿಸುವುವು. ಮನೆಯ ಮುಂದೆಯೆ, ಅಡಕೆ ತೋಟದಾಚೆಯ ಮೊದಲುಗೊಂಡು ನಡು ಆಕಾಶದವರೆಗೆಂಬಂತೆ ಗೋಡೆ ಹಾಕಿದಂತೆ ಕಡಿದಾಗಿ ವಿಜೃಂಭಿಸಿ ಮಹೋನ್ನತವಾಗಿ ಮೇಲೆದ್ದು, ನಿತ್ಯ ಶ್ಯಾಮಲ ಅರಣ್ಯಾಚ್ಛಾದಿತವಾಗಿರುವ ಮಲೆ ಮತ್ತು ಮನೆಯ ಹಿಂಬದಿಯಿಂದಲೆ ಪ್ರಾರಂಭವಾಗಿ ವಿರಳ ಮರಪೊದೆಗಳಿಂದ ಹಕ್ಕಲು ಹಕ್ಕಲಾಗಿ ಮೇಲೇರಿ ಏರಿ ಬಂಡೆ ಮಂಡೆಯಲ್ಲಿ ಕೊನೆಗೊಂಡಿರುವ ಹಿರಿಯ ಹಾಸುಗಳಲ್ಲಿನ ಕವಿಶೈಲ! – ಇವೆರಡೂ ಕವಿ ಹೃದಯದ ಅಕ್ಕಪಕ್ಕದಲ್ಲಿರುವ ಎರಡು ಶ್ವಾಸಕೋಶಗಳಂತೆ ಅವರ ಬಾಲ್ಯದ ರಸಜೀವನದ ಬದುಕಿಗೆ ಉಸಿರನ್ನಿತ್ತು ಪೊರೆದಿವೆ. ಮುಂದೆ ಮಹಾಕವಿಯಾಗಲಿರುವ ಒಂದು ಋಷಿ ಚೇತನದ ವಿಕಾಸನಕ್ಕೆ ವಿಧಿ ಅದಕ್ಕಿಂತಲೂ ಹೆಚ್ಚು ಅರ್ಹವೂ ಅನುಕೂಲವೂ ಆದ ಭಿತ್ತಿರಂಗವನ್ನು ಕೆತ್ತಲಾರದೆಂದೇ ತೋರುತ್ತದೆ.

ವಿದ್ಯಾಭ್ಯಾಸ:
ಮೈಸೂರಿನ ‘ಮಹಾರಾಜಾ’ ಕಾಲೇಜಿನಲ್ಲಿ ಓದಿದ ಇವರು, ಮೈಸೂರು ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸಿ ಉಪ ಕುಲಪತಿಯಾಗಿ ನಿವೃತ್ತರಾದರು.

ಕನ್ನಡ ಸಾಹಿತ್ಯಕ್ಕೆ ಕುವೆಂಪು ಅವರ ಕೊಡುಗೆಗಳು:
ಕೃತಿಗಳು:
ಕುವೆಂಪು ಅವರು ೭೦ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ.
ಮಹಾಕಾವ್ಯ:
ಶ್ರೀರಾಮಾಯಣ ದರ್ಶನಂ – (ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಕೃತಿ),

ಕಾದಂಬರಿ:
ಮಲೆಗಳಲ್ಲಿ ಮದುಮಗಳು,
ಕಾನೂರು ಹೆಗ್ಗಡಿತಿ
ಮಲೆಗಳಲ್ಲಿ ಮದುಮಗಳು,
ಕಾನೂರು ಹೆಗ್ಗಡಿತಿ
ಕಥಾ ಸಂಕಲನ:
ಸನ್ಯಾಸಿ ಮತ್ತು ಇತರ ಕತೆಗಳು
ಸನ್ಯಾಸಿ ಮತ್ತು ಇತರ ಕತೆಗಳು
ಜೀವನ ಚರಿತ್ರೆ:
ಸ್ವಾಮಿ ವಿವೇಕಾನಂದ
ರಾಮಕೃಷ್ಣ ಪರಮಹಂಸ
ಸ್ವಾಮಿ ವಿವೇಕಾನಂದ
ರಾಮಕೃಷ್ಣ ಪರಮಹಂಸ
ನಾಟಕಗಳು:
ಶೂದ್ರ ತಪಸ್ವಿ
ರಕ್ತರಾತ್ರಿ
ರಕ್ತಾಕ್ಷಿ
ಯಮನ ಸೋಲು
ಬೆರಳ್ಗೆ ಕೊರಳ್
ಶೂದ್ರ ತಪಸ್ವಿ
ರಕ್ತರಾತ್ರಿ
ರಕ್ತಾಕ್ಷಿ
ಯಮನ ಸೋಲು
ಬೆರಳ್ಗೆ ಕೊರಳ್
ಕವನಸಂಕಲನಗಳು:
ಪಕ್ಷಿಕಾಶಿ,
ಪಾಂಚಜನ್ಯ,
ಅನಿಕೇತನ,
ಚಂದ್ರಮಂಚಕೆ ಬಾ ಚಕೋರಿ,
ಕೊಳಲು
ಪಕ್ಷಿಕಾಶಿ,
ಪಾಂಚಜನ್ಯ,
ಅನಿಕೇತನ,
ಚಂದ್ರಮಂಚಕೆ ಬಾ ಚಕೋರಿ,
ಕೊಳಲು
ಪ್ರಶಸ್ತಿ- ಪುರಸ್ಕಾರ:
⦁ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ – (ಶ್ರೀರಾಮಾಯಣ ದರ್ಶನಂ) (1212)
⦁ ಪದ್ಮಭೂಷಣ (೧೯೫೮)
⦁ ಮೈಸೂರು ವಿಶ್ವವಿದ್ಯಾನಿಲಯದಿಂದ ಗೌರವ ಡಿ.ಲಿಟ್.
⦁ ರಾಷ್ಟ್ರಕವಿ ಪುರಸ್ಕಾರ (೧೯೬೪)
⦁ ಕರ್ನಾಟಕ ವಿಶ್ವವಿದ್ಯಾಲಯದಿಂದ ಗೌರವ ಡಿ.ಲಿಟ್. (೧೯೬೬)
⦁ ಜ್ಞಾನಪೀಠ ಪ್ರಶಸ್ತಿ (ಶ್ರೀ ರಾಮಾಯಣ ದರ್ಶನಂ) (೧೯೬೮)
⦁ ಬೆಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಿ.ಲಿಟ್. (೧೯೬೯)
⦁ ಪದ್ಮವಿಭೂಷಣ (೧೯೮೯)
⦁ ಕರ್ನಾಟಕ ರತ್ನ (೧೯೯೨)
⦁ ಪಂಪ ಪ್ರಶಸ್ತಿ(೧೯೮೮)

ಚಾ ಶಿ ಜಯಕುಮಾರ್ ಕೃಷ್ಣರಾಜಪೇಟೆ.
ಚಾ ಶಿ ಜಯಕುಮಾರ್ ಕೃಷ್ಣರಾಜಪೇಟೆ