ಪರಿಚಯ:
ಮಾಸ್ತಿ ವೆಂಕಟೇಶ ಅಯ್ಯಂಗಾರರು (ಜೂನ್ ೬ -ಜೂನ್ ೬ ೧೯೮೬)-ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವ ಈ ಸಾಹಿತಿ ಶ್ರೀನಿವಾಸ ಎಂಬ ಕಾವ್ಯನಾಮದಡಿಯಲ್ಲಿ ಬರೆಯುತ್ತಿದರು. ೧೯೨೦ ರಲ್ಲಿ ಅವರ ಮೊದಲ ಪುಸ್ತಕ ಕೆಲವು ಸಣ್ಣ ಕಥೆಗಳು ಪ್ರಕಟಗೊಂಡಿತು. ಸಣ್ಣಕತೆ, ನೀಳ್ಗತೆ, ಕಾದಂಬರಿ, ಕಾವ್ಯ, ನಾಟಕ, ಜೀವನ ಚರಿತ್ರೆ, ಪ್ರಬಂಧ, ವಿಮರ್ಶೆ, ಸಂಪಾದನೆ, ಅನುವಾದ – ಹೀಗೆ ಕನ್ನಡ ಸಾಹಿತ್ಯದ ಪ್ರತಿಯೊಂದು ಕ್ಷೇತ್ರಕ್ಕೂ ತಮ್ಮ ಕೊಡುಗೆಯನ್ನು ನೀಡಿದ್ದಾರೆ. ೧೯೮೩ ರಲ್ಲಿ ಚಿಕವೀರ ರಾಜೇಂದ್ರ ಕಾದಂಬರಿಗಾಗಿ ಜ್ಞಾನಪೀಠ ಪ್ರಶಸ್ತಿಯಿಂದ ಪುರಸ್ಕೃತಗೊಂಡ ಮಾಸ್ತಿಯವರು ಕನ್ನಡಕ್ಕೆ ನಾಲ್ಕನೆ ಜ್ಞಾನಪೀಠ ಪ್ರಶಸ್ತಿಯನ್ನು ತಂದು ಕೊಟ್ಟರು. ಜೀವನ ಪರ್ಯಂತ ಕನ್ನಡ ಸೇವೆಯನ್ನು ಮಾಡಿದ ಮಾಸ್ತಿಯವರು ಜೂನ್ ೬ ೧೯೮೬ ರಂದು ನಿಧನ ಹೊಂದಿದರು.

ಜನನ ಬಾಲ್ಯ:
ಮಾಸ್ತಿ ವೆಂಕಟೇಶ ಅಯ್ಯಂಗಾರರು ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಮಾಸ್ತಿ ಗ್ರಾಮದಲ್ಲಿ ಜೂನ್ ೬ ೧೮೯೧ ರಲ್ಲಿ ಜನಿಸಿದರು. ಅವರು ಹುಟ್ಟುವ ಕಾಲಕ್ಕೆ ಮನೆಯಲ್ಲಿ ಬಡತನವಿತ್ತು. ಒಂದು ಕಾಲಕ್ಕೆ ಶ್ರೀಮಂತಿಕೆಯಿಂದ ವಿಜೃಂಭಿಸಿದ ಕುಟುಂಬ ಅವರ ಪೂರ್ವಿಕರದು. ಮಾಸ್ತಿ ವೆಂಕಟೇಶ ಅಯ್ಯಂಗಾರ್ “ಪೆರಿಯಾತ್” ಎಂದರೆ ದೊಡ್ಡ ಮನೆಯವರು. ಅವರ ವಿದ್ಯಾಭ್ಯಾಸ ಬಹಳ ಕಷ್ಟದ ಪರಿಸ್ಥಿತಿಯಲ್ಲಿ ಜರುಗಿತು. ಅವರ ಹಿರಿಯರು ಬಹು ಜನಕ್ಕೆ ಅನ್ನ ಹಾಕಿ ಹೆಸರು ಗಳಿಸಿದ್ದರಾದರೂ ಅವರು ವಾರದ ಮನೆಗಳಲ್ಲಿ ಊಟಮಾಡಿ ವಿದ್ಯಾಭ್ಯಾಸ ಮಾಡಬೇಕಾಯಿತು. ಹೊಂಗೇನಳ್ಳಿ, ಯಲಂದೂರು, ಶಿವಾರಪಟ್ಟಣ, ಮಳವಳ್ಳಿ, ಮೈಸೂರು, ಕಡೆಗೆ ಮದರಾಸು ಹೀಗೆ ನಾನಾ ಕಡೆಗಳಲ್ಲಿ ತಮ್ಮ ಬಂಧುಗಳ ನೆರವಿನಿಂದ ವಿದ್ಯಾಭ್ಯಾಸ ಮಾಡಿ ಎಂ.ಎ ಪದವಿ ಗಳಿಸಿದರು. ತಮ್ಮ ವಿದ್ಯಾಭ್ಯಾಸ ಕಾಲದಲ್ಲಿ ಮಾಸ್ತಿ ಯಾವ ಪರೀಕ್ಷೆಯಲ್ಲೂ ಪ್ರಥಮ ಸ್ಥಾನ ವನ್ನು ಬೇರೆಯವರಿಗೆ ಬಿಟ್ಟುಕೊಡಲಿಲ್ಲ.

ವಿದ್ಯಾಭ್ಯಾಸ:
ಮದ್ರಾಸಿನಲ್ಲಿ ಇಂಗ್ಲೀಷ್ ಎಂ.ಎ ಮಾಡಿಕೊಂಡು ಚಿನ್ನದ ಪದಕ ಗಳಿಸಿದ ಮಾಸ್ತಿ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಸುಮಾರು ಒಂದೂವರೆ ತಿಂಗಳು ಉಪಾಧ್ಯಾಯರಾಗಿದ್ದು ಬೆಂಗಳೂರಿಗೆ ಬಂದು ಸಿವಿಲ್ ಪರೀಕ್ಷೆಗೆ ಕುಳಿತು ಅಲ್ಲಿಯೂ ಪ್ರಥಮರಾಗಿ ತೇರ್ಗಡೆಯಾದರು. ಸರ್ಕಾರದಲ್ಲಿ ಅಸಿಸ್ಟೆಂಟ್ ಕಮೀಶನರಾಗಿ ಕೆಲಸಕ್ಕೆ ಸೇರಿ ಸಮರ್ಪಕವಾಗಿ ಕೆಲಸ ನಿರ್ವಹಿಸಿದರು.

ಕನ್ನಡ ಸಾಹಿತ್ಯಕ್ಕೆ ಮಾಸ್ತಿ ಅವರ ಕೊಡುಗೆಗಳು:
ಕೃತಿಗಳು:
ಸಣ್ಣ ಕತೆಗಳ ಸಂಗ್ರಹ
ಸಣ್ಣಕತೆಗಳು (೫ ಸಂಪುಟಗಳು)
ರಂಗನ ಮದುವೆ
ಮಾತುಗಾರ ರಾಮಣ್ಣ
ಸಣ್ಣಕತೆಗಳು (೫ ಸಂಪುಟಗಳು)
ರಂಗನ ಮದುವೆ
ಮಾತುಗಾರ ರಾಮಣ್ಣ
ನೀಳ್ಗತೆ
ಸುಬ್ಬಣ್ಣ (೧೯೨೮)
ಶೇಷಮ್ಮ(೧೯೭೬)
ಸುಬ್ಬಣ್ಣ (೧೯೨೮)
ಶೇಷಮ್ಮ(೧೯೭೬)
ಕಾವ್ಯ ಸಂಕಲನಗಳು
ಬಿನ್ನಹ, ಮನವಿ(೧೯೨೨)
ಅರುಣ(೧೯೨೪)
ತಾವರೆ(೧೯೩೦)
ಸಂಕ್ರಾಂತಿ(೧೯೬೯)
ನವರಾತ್ರಿ(೫ ಭಾಗ ೧೯೪೪-೧೯೫೩)
ಚೆಲುವು, ಸುನೀತ
ಮಲಾರ
ಶ್ರೀರಾಮ ಪಟ್ಟಾಭಿಷೇಕ (ಖಂಡಕಾವ್ಯ)
ಬಿನ್ನಹ, ಮನವಿ(೧೯೨೨)
ಅರುಣ(೧೯೨೪)
ತಾವರೆ(೧೯೩೦)
ಸಂಕ್ರಾಂತಿ(೧೯೬೯)
ನವರಾತ್ರಿ(೫ ಭಾಗ ೧೯೪೪-೧೯೫೩)
ಚೆಲುವು, ಸುನೀತ
ಮಲಾರ
ಶ್ರೀರಾಮ ಪಟ್ಟಾಭಿಷೇಕ (ಖಂಡಕಾವ್ಯ)
ಜೀವನ ಚರಿತ್ರೆ
ರವೀಂದ್ರನಾಥ ಠಾಕೂರ(೧೯೩೫)
ಶ್ರೀ ರಾಮಕೃಷ್ಣ(೧೯೩೬)
ರವೀಂದ್ರನಾಥ ಠಾಕೂರ(೧೯೩೫)
ಶ್ರೀ ರಾಮಕೃಷ್ಣ(೧೯೩೬)
ಪ್ರಬಂಧ
ಕನ್ನಡದ ಸೇವೆ(೧೯೩೦)
ವಿಮರ್ಶೆ (೪ ಸಂಪುಟ ೧೯೨೮-೧೯೩೯)
ಜನತೆಯ ಸಂಸ್ಕೃತಿ(೧೯೩೧)
ಜನಪದ ಸಾಹಿತ್ಯ(೧೯೩೭)
ಆರಂಭದ ಆಂಗ್ಲ ಸಾಹಿತ್ಯ(೧೯೭೯)
ಕನ್ನಡದ ಸೇವೆ(೧೯೩೦)
ವಿಮರ್ಶೆ (೪ ಸಂಪುಟ ೧೯೨೮-೧೯೩೯)
ಜನತೆಯ ಸಂಸ್ಕೃತಿ(೧೯೩೧)
ಜನಪದ ಸಾಹಿತ್ಯ(೧೯೩೭)
ಆರಂಭದ ಆಂಗ್ಲ ಸಾಹಿತ್ಯ(೧೯೭೯)
ನಾಟಕ
ಶಾಂತಾ, ಸಾವಿತ್ರಿ, ಉಷಾ (೧೯೨೩)
ತಾಳೀಕೋಟೆ(೧೯೨೯)
ಶಿವಛತ್ರಪತಿ(೧೯೩೨)
ಯಶೋಧರಾ(೧೯೩೩)
ಕಾಕನಕೋಟೆ(೧೯೩೮)
ಲಿಯರ್ ಮಾಹಾರಾಜ
ಚಂಡಮಾರುತ, ದ್ವಾದಶರಾತ್ರಿ
ಹ್ಯಾಮ್ಲೆಟ್
ಶೇಕ್ಸ್ ಪಿಯರ್ ದೃಶ್ಯಗಳು ೧,೨,೩
ಪುರಂದರದಾಸ
ಕನಕಣ್ಣ
ಕಾಳಿದಾಸ
ಅಜ್ಜನದಾರಿ, ಭಟ್ಟರಮಗಳು, ವಿಮಲಾ ಮರಿಯಾನ್
ಬಾನುಲಿ ದೃಶ್ಯಗಳು
ಶಾಂತಾ, ಸಾವಿತ್ರಿ, ಉಷಾ (೧೯೨೩)
ತಾಳೀಕೋಟೆ(೧೯೨೯)
ಶಿವಛತ್ರಪತಿ(೧೯೩೨)
ಯಶೋಧರಾ(೧೯೩೩)
ಕಾಕನಕೋಟೆ(೧೯೩೮)
ಲಿಯರ್ ಮಾಹಾರಾಜ
ಚಂಡಮಾರುತ, ದ್ವಾದಶರಾತ್ರಿ
ಹ್ಯಾಮ್ಲೆಟ್
ಶೇಕ್ಸ್ ಪಿಯರ್ ದೃಶ್ಯಗಳು ೧,೨,೩
ಪುರಂದರದಾಸ
ಕನಕಣ್ಣ
ಕಾಳಿದಾಸ
ಅಜ್ಜನದಾರಿ, ಭಟ್ಟರಮಗಳು, ವಿಮಲಾ ಮರಿಯಾನ್
ಬಾನುಲಿ ದೃಶ್ಯಗಳು
ಕಾದಂಬರಿ
ಚೆನ್ನಬಸವ ನಾಯಕ(೧೯೫೦)
ಚಿಕವೀರ ರಾಜೇಂದ್ರ(೧೯೫೬)
ಚೆನ್ನಬಸವ ನಾಯಕ(೧೯೫೦)
ಚಿಕವೀರ ರಾಜೇಂದ್ರ(೧೯೫೬)
ಪ್ರಶಸ್ತಿ- ಪುರಸ್ಕಾರ:
ಜ್ಞಾನಪೀಠ ಪ್ರಶಸ್ತಿ (೧೯೮೩)
ಮೈಸೂರು ವಿಶ್ವವಿದ್ಯಾಲಯದ ಡಿ. ಲಿಟ್(೧೯೭೭)
ಕರ್ನಾಟಕ ವಿಶ್ವವಿದ್ಯಾಲಯದ ಡಿ. ಲಿಟ್(೧೯೫೬)
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ(೧೯೬೮)
ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪದವಿ(೧೯೫೩)
ದಕ್ಷಿಣ ಭಾರತ ಸಾಹಿತ್ಯಗಳ ಸಮ್ಮೇಳನ ಅಧ್ಯಕ್ಷ ಪದವಿ(೧೯೪೬)

ನಿಮ್ಮದೊಂದು ಉತ್ತರ